ಶಿಕಾರಿಪುರದಲ್ಲಿ ಹಾನಗಲ್ಲ ಶ್ರೀ ಕುಮಾರಸ್ವಾಮಿಗಳ 151ನೇ ಜಯಂತಿ

ಶಿಕಾರಿಪುರ: ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಸೆ. 27ರಿಂದ ಅ. 7ರವರೆಗೆ ಹಮ್ಮಿಕೊಂಡಿರುವ ಲಿಂಗೈಕ್ಯ ಶ್ರೀ ಹಾನಗಲ್ಲ ಕುಮಾರಸ್ವಾಮಿಗಳ 151ನೇ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉತ್ಸವ ಸಮಿತಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಬಿ.ವೈ.ರಾಘವೇಂದ್ರ ಶುಕ್ರವಾರ ಬಿಡುಗಡೆಗೊಳಿಸಿದರು.

ಪ್ರತಿದಿನ ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮ ಆರಂಭವಾಗಲಿದ್ದು, ಹಂದಿಗುಂದ ಶ್ರೀ ಸಿದ್ದೇಶ್ವರ ವಿರಕ್ತ ಮಠದ ಶ್ರೀ ಶಿವಾನಂದ ಸ್ವಾಮೀಜಿ ಪ್ರವಚನ ನೀಡುವರು ಎಂದು ಬಿ.ವೈ.ರಾಘವೇಂದ್ರ ತಿಳಿಸಿದರು.

ಸೆ. 27ರಂದು ಸಂಜೆ 6.30ಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ವಿಧಾನಸಭೆ ವಿಪಕ್ಷ ನಾಯಕ ನಾಯಕ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆ ವಹಿಸುವರು. ಶ್ರೀಶೈಲ ಪೀಠದ ಡಾ. ಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ, ಬಾದಾಮಿ ಶಿವಯೋಗಿ ಮಂದಿರದ ಶ್ರೀ ಸಂಗನಬಸವ ಸ್ವಾಮೀಜಿ, ಆನಂದಪುರ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಕಾಳೇನಹಳ್ಳಿ ಶ್ರೀ ರೇವಣಸಿದ್ಧ ಸ್ವಾಮೀಜಿ, ಹಾವೇರಿಯ ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಿವಾನಂದ ಶ್ರೀಗಳು ರಚಿಸಿರುವ ಕಾರಣಿಕ ಕುಮಾರಯೋಗಿ ಹಾಗೂ ಸಮಾಜ ವತ್ಸಲ ಕೃತಿಗಳನ್ನು ಅಂದು ಬಿಡುಗಡೆ ಮಾಡಲಾಗುವುದು ಎಂದು ವಿವರಿಸಿದರು.

ಸೆ. 28ರ ಸಮಾರಂಭದಲ್ಲಿ ನಾರಾಯಣಗುರು ಸಂಸ್ಥಾನ ಸೋಲೂರು ಮಠದ ಶ್ರೀ ರೇಣುಕಾನಂದ ಸ್ವಾಮೀಜಿ, ಶ್ರೀ ಗುರುಲಿಂಗ ಜಂಗಮ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು.

ಸೆ. 29ರಂದು ಕಾಗಿನೆಲೆ ಕನಕ ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಶ್ರೀ ಮಹಾಂತ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಬಿ.ಕೆ.ಸಂಗಮೇಶ್ವರ ಅತಿಥಿಯಾಗಿ ಪಾಲ್ಗೊಳ್ಳುವರು. ಸೆ. 30ರಂದು ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ದಿಂಡದಹಳ್ಳಿಯ ಶ್ರೀ ಪಶುಪತಿ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದರು. ಸೆ. 30ರ ಬೆಳಗ್ಗೆ 10 ಗಂಟೆಗೆ ಸಾಂಸ್ಕೃತಿಕ ಭವನದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಅ. 1ರಂದು ಹಳೇಬೀಡು ಪುಷ್ಪಗಿರಿ ಸಿಂಹಾಸನದ ಶ್ರೀ ಸೋಮಶೇಖರ ಸ್ವಾಮೀಜಿ, ತೊಗರ್ಸಿಯ ಶ್ರೀ ಚನ್ನವೀರ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಅ. 2ರಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮ ಸ್ವಾಮೀಜಿ, ಕಡೇನಂದಿಹಳ್ಳಿಯ ಶ್ರೀ ವೀರಭದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಅ. 3ರಂದು ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಅ. 4ರಂದು ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಶ್ರೀ ಸಿದ್ದೇಶ್ವರ ಸ್ವಾಮೀಜಿ, ಶ್ರೀ ವಿರೂಪಾಕ್ಷ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಅ. 5ರಂದು ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ, ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಶ್ರೀ ಸೇವಾಲಾಲ್ ಭಗತ್ ಸಾನ್ನಿಧ್ಯ ವಹಿಸುವರು. ಅ. 6ರಂದು ಶ್ರೀ ಶಾಂತಲಿಂಗೇಶ್ವರ ಸ್ವಾಮೀಜಿ, ಶ್ರೀ ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಎಚ್.ಜಿ.ಹನ್ನೆರಡು ಮಠ ರಚಿಸಿರುವ ‘ಯುಗಪುರುಷ’ ನಾಟಕ ಕೃತಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಅ. 7ರಂದು ಬೆಳಗ್ಗೆ 11ಕ್ಕೆ ಧರ್ಮಸಭೆ ಸಮಾರೋಪ ಸಮಾರಂಭ ನಡೆಯಲಿದೆ. ಹುಬ್ಬಳ್ಳಿ ಮೂರುಸಾವಿರ ಮಠದ ಶ್ರೀ ಗುರುಸಿದ್ಧರಾಜ ಯೋಗೀಂದ್ರ ಸ್ವಾಮೀಜಿ, ತರಳಬಾಳು ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಆನಂದಪುರದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬಿ.ಎಸ್.ಯಡಿಯೂರಪ್ಪ, ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ, ಎಂಎಲ್​ಸಿ ಎಸ್.ರುದ್ರೇಗೌಡ, ಮಾಜಿ ಶಾಸಕ ಬಿ.ವೈ.ರಾಘವೇಂದ್ರ ಪಾಲ್ಗೊಳ್ಳುವರು.

ಅಂದು ಬೆಳಗ್ಗೆ 8 ಗಂಟೆಯಿಂದ ಹಾನಗಲ್ಲ ಶ್ರೀ ಕುಮಾರಸ್ವಾಮಿಗಳ ಭಾವಚಿತ್ರದ ಮೆರವಣಿಗೆ ಅಕ್ಕಮಹಾದೇವಿ ವೃತ್ತದಿಂದ

ಉತ್ಸವ ಸಮಿತಿ ಅಧ್ಯಕ್ಷ ಕೆ.ಶೇಖರಪ್ಪ, ತಾಲೂಕು ವೀರಶೈವ ಮಹಾಸಭಾ ಅಧ್ಯಕ್ಷ ಬಿ.ರುದ್ರಮುನಿ, ಚನ್ನವೀರಪ್ಪ, ಬಿ.ಡಿ.ಭೂಕಾಂತ್, ವಸಂತಗೌಡ, ರಂಜನಿ ಗೌಡ, ಗಿರೀಶ್ ಧಾರವಾಡ, ನಿರಂಜನಗೌಡ ಸುದ್ದಿಗೋಷ್ಠಿಯಲ್ಲಿದ್ದರು.

***

Note from Kannada.Club : This story has been auto-generated from a syndicated feed from http://vijayavani.net/nvitation-magazine-sri-kumaraswamy-bs-yeddyurappa-shamanoor-shivashankarappa/